One Kannada News

ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆಗೆ ಯತ್ನ

ಹೈದರಾಬಾದ್: ರೈತನೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಆತನನ್ನು ಪೊಲೀಸ್ ಸಿಬ್ಬಂದಿಯೊಬ್ಬರು 2 ಕಿ.ಮೀ ಹೊತ್ತುಕೊಂಡೇ ಸಾಗಿ ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿರುವ ಘಟನೆ ತೆಲಂಗಾಣದ ಕರೀಂನಗರದ ವೀಣವಂಕ ಮಂಡಲದ ಬೇಟಿಗಲ್ ಗ್ರಾಮದಲ್ಲಿ ನಡೆದಿದೆ.

ಕೌಟುಂಬಿಕ ಕಲಹದ ಹಿನ್ನೆಲೆ ರೈತನೊಬ್ಬ ತನ್ನ ಜಮೀನಿನಲ್ಲಿ ಕೀಟನಾಶಕ ಸೇವಿಸಿದ್ದ ಇದನ್ನು ಗಮನಿಸಿದ ಅಕ್ಕ ಪಕ್ಕದ ರೈತರು ತಕ್ಷಣ ಪೊಲೀಸ್‌ ಠಾಣೆಗೆ ಹಾಗೂ ತುರ್ತು ಸೇವೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿದರೂ ತುರ್ತು ಸೇವೆ ಮಾತ್ರ ಆಗಮಿಸಿರಲಿಲ್ಲ.

ಈ ವೇಳೆ ಸ್ಥಳಕ್ಕೆ ಬಂದಿದ್ದ ಪೊಲೀಸ್ ಸಿಬ್ಬಂದಿ ಜಯಪಾಲ್ ವಿಷ ಸೇವಿಸಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರೈತನನ್ನು ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೊಲ, ಗದ್ದೆಗಳಲ್ಲಿ ಸುಮಾರು 2 ಕಿ.ಮೀ ನಡೆದುಕೊಂಡೇ ಹೋಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸರಿಯಾದ ಸಮಯಕ್ಕೆ ರೈತನನ್ನು ಆಸ್ಪತ್ರೆಗೆ ದಾಖಲಿಸಿದ್ದಕ್ಕೆ ಸದ್ಯ ಆತನ ಜೀವ ಉಳಿದಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದೀಗ ಪೊಲೀಸ್ ಸಿಬ್ಬಂದಿಯ ಕಾರ್ಯಕ್ಕೆ ಸ್ಥಳೀಯರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Tags

Share this post:

Related Posts

Leave a Comment

Your email address will not be published. Required fields are marked *

Scroll to Top